varthabharthi


ಕರ್ನಾಟಕ

ದಾಂಡೇಲಿ: ಮೊಮ್ಮಗನಿಗೆ ಕೊರೋನ ದೃಢ; ತನಗೂ ಸೋಂಕು ಹರಡಿರುವ ಶಂಕೆಯಲ್ಲಿ ವೃದ್ಧೆ ಆತ್ಮಹತ್ಯೆ

ವಾರ್ತಾ ಭಾರತಿ : 22 May, 2020

ಸಾಂದರ್ಭಿಕ ಚಿತ್ರ

ಕಾರವಾರ, ಮೇ.22: ಕೊರೋನ ಸೋಂಕಿತ ಮೊಮ್ಮಗನ ಸಂಪರ್ಕಕ್ಕೆ ಬಂದು ಕ್ವಾರಂಟೈನ್ ಗೆ ಒಳಗಾಗಿದ್ದ ಮಹಿಳೆಯೊಬ್ಬರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಶುಕ್ರವಾರ ನಡೆದಿದೆ.

ಲಕ್ಷ್ಮಿ (62) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಹೊರ ರಾಜ್ಯದಿಂದ ಬಂದ ಈಕೆಯ ಮೊಮ್ಮಗನಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಕುಟುಂಬದವರನ್ನು ದಾಂಡೇಲಿಯ ಸರಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೊಮ್ಮಗನಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ತಮಗೂ ಸೋಂಕು ಬಂದಿದೆ ಎಂದು ಭಾವಿಸಿ ಮಹಿಳೆ ವಾರ್ಡ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)